ಬೆಂಗಳೂರಿನಲ್ಲಿ ವಿಚಿತ್ರ ಕಳ್ಳ; ಎಳನೀರು ಕದಿಯಲು ಕಾರಿನಲ್ಲಿ ಬರುತ್ತಿದ್ದ ಆಸಾಮಿ!

0
Spread the love

ಬೆಂಗಳೂರು:- ಸಾಮಾನ್ಯವಾಗಿ ಎಲ್ಲರೂ ನಗನಾಣ್ಯ ಕಳ್ಳತನ ಮಾಡಿದ್ರೆ, ಈ ಕಳ್ಳನ ಟಾರ್ಗೆಟ್ ಮಾತ್ರ ಎಳನೀರು ಮಾತ್ರ.

Advertisement

ಹೌದು, ನಗರದಲ್ಲಿ ಎಳನೀರು ಕಳ್ಳತನ ಮಾಡುತ್ತಿದ್ದ ಅಸಾಮಿಯನ್ನ ಪೊಲೀಸರು ಬಂಧಿಸಿದ್ದಾರೆ. ಗಿರಿನಗರ ಪೊಲೀಸರಿಂದ ಮೋಹನ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ. ಕಳೆದ ಮೂರು ತಿಂಗಳಿಂದ ಮೋಹನ್ ಎಳನೀರು ಕಳ್ಳತನ ಮಾಡುತ್ತಿದ್ದ. ಎಳನೀರು ಕದಿಯಲೆಂದೆ ಕಾರಿನಲ್ಲಿ ಅರಾಮಿನ ಬರುತ್ತಿದ್ದ.

ರಾತ್ರಿ ವೇಳೆ ರಸ್ತೆ ಬದಿಯ ಎಳನೀರು ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ. ಗಿರಿನಗರದ ಮಂಕುತಿಮ್ಮನ ಪಾರ್ಕ್ ಬಳಿ ಇತ್ತೀಚಿಗೆ ಎಳನೀರು ಕಳ್ಳತನ ಮಾಡಿದ್ದ.

ರಾಜಣ್ಣ ಎಂಬುವರು 1150 ಎಳನೀರು ಆರೋಪಿ ಮೋಹನ್ ಕದ್ದಿದ್ದ. ಈ ಸಂಬಂಧ ಎಳನೀರು ವ್ಯಾಪಾರಿ ರಾಜಣ್ಣ ಗಿರಿನಗರ ಠಾಣೆಗೆ ದೂರು ನೀಡಿದ್ದ. ಸಿಸಿಟಿವಿಗಳ ಪರಿಶೀಲನೆ ನಡೆಸಿ ಪೊಲೀಸರು ಮೋಹನ್ ನನ್ನು ಅರೆಸ್ಟ್ ಮಾಡಿದ್ದಾರೆ.

ಬಂಧಿತನಿಂದ ಎಳನೀರು ಸೇರಿ ಎಂಟು ಲಕ್ಷ ಮೌಲ್ಯದ ಒಂದು ಕಾರು, ರಾಯಲ್ ಎನ್ ಫೀಲ್ಡ್ ಬೈಕ್ ವಶಕ್ಕೆ ಪಡೆಯಲಾಗಿದೆ.

ಪೊಲೀಸರ ತನಿಖೆ ವೇಳೆ ಎಳನೀರು ಕಳ್ಳನ ಜೂಜಾಟ ಬೆಳಕಿಗೆ ‌ಬಂದಿದೆ. ಆನ್‌ಲೈನ್ ನಲ್ಲಿ ರಮ್ಮಿ ಆಡಿ ಲಕ್ಷ ಲಕ್ಷ ಹಣ ಕಳೆದುಕೊಂಡಿದ್ದ ಆರೋಪಿಯು, ಸಾಲ ಜಾಸ್ತಿ ಆಗಿದ್ದರಿಂದ ಎಳನೀರು ಕಳ್ಳತನಕ್ಕೆ ಪ್ಲಾನ್ ಮಾಡಿದ್ದ. ಪ್ರತಿದಿನ ಕಾರು ಬಾಡಿಗೆಗೆ ಪಡೆದು ಎಳನೀರು ಕಳ್ಳತನಕ್ಕೆ ಆರೋಪಿ ಬರುತ್ತಿದ್ದ.

ಈ ಹಿಂದೆ ಎಳನೀರು ವ್ಯಾಪಾರಿಯಾಗಿದ್ದ ಆರೋಪಿ ಮೋಹನ್‌ ಫ್ರೀ ಟೈಂನಲ್ಲಿ ರಮ್ಮಿ ಆಡಿ ಲಕ್ಷ ಲಕ್ಷ ಸಾಲ ಮಾಡಿಕೊಂಡಿದ್ದ. ನಂತರ ಕಾರು ಬಾಡಿಗೆ ಪಡೆದು ಟ್ಯಾಕ್ಸಿ ಓಡಿಸುತ್ತಿದ್ದ. ನಂತರ ಟ್ಯಾಕ್ಸಿ ಬಿಟ್ಟು ರಾತ್ರಿ ವೇಳೆ ಎಳನೀರು ಕಳ್ಳತನಕ್ಕೆ ಇಳಿದಿದ್ದ.

ಕದ್ದ ಎಳನೀರು ಮಾರಾಟಕ್ಕೆ ಪರ್ಮನೆಂಟ್ ಕಸ್ಟಮರ್ ಇಟ್ಕೊಂಡಿದ್ದ ಅಸಾಮಿ, ಎಳನೀರು ವ್ಯಾಪಾರಿಯೊಬ್ಬನಿಗೆ ಮದ್ದೂರು ಎಳನೀರು ಅಂತಾ ಮಾರಾಟ ಮಾಡಿ ಹೋಗುತ್ತಿದ್ದ.

ಡೈಲಿ 100-150 ಎಳನೀರು ಕದ್ದು ಮಾರಾಟ ಮಾಡುತ್ತಿದ್ದರು. ತಮಿಳುನಾಡು ಮೂಲದ ಆರೋಪಿ ಮೋಹನ್ ಎನ್ನಲಾಗಿದೆ. ಮಡಿವಾಳದಲ್ಲಿ ವಾಸವಾಗಿದ್ದ ಮೋಹನ್ ನನ್ನು ಸಧ್ಯ ಅರೆಸ್ಟ್ ಮಾಡಿರುವ ಪೊಲೀಸ್ ತನಿಖೆ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here