ಸದೃಢ ದೇಹದಲ್ಲಿ ಸದೃಢ ಮನಸ್ಸು

0
ragi malt
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಹೆಚ್ಚಿನ ಪೋಷಕಾಂಶ ಹೊಂದಿರುವ ರಾಗಿ ಮಾಲ್ಟ್ ಸೇವಿಸುವುದರಿಂದ ಮಕ್ಕಳಲ್ಲಿರುವ ಅಪೌಷ್ಟಿಕತೆ ಮತ್ತು ಅನೇಮಿಯಾವನ್ನು ನಿವಾರಿಸಬಹುದು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.

Advertisement

ಇಲ್ಲಿನ ಸಿದ್ಧಲಿಂಗ ನಗರದ ಸರಕಾರಿ ಪ್ರೌಡಶಾಲಾ ಮಕ್ಕಳ್ಳಿಗೆ ರಾಗಿ ಮಾಲ್ಟ್ ವಿತರಿಸಿ ಮಾತನಾಡಿದ ಅವರು, ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುವುದರಿಂದ ಮಕ್ಕಳು ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಲು ರಾಗಿ ಮಾಲ್ಟ್ ಅತ್ಯವಶಕ. ರಾಗಿ ಮಾಲ್ಟ್ ಸೇವಿಸುವದರಿಂದ ಮಕ್ಕಳ ಆರೋಗ್ಯ ಉತ್ತಮವಾಗಿ, ಹೆಚ್ಚು ಕ್ರಿಯಾಶೀಲರಾಗಿ ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಲು ಸಹಕಾರಿಯಾಗಿದೆ ಎಂದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ ಮಾತನಾಡಿ, ಸರ್ಕಾರದ ಯೋಜನೆಯನ್ನು ಶಾಲಾ ಮಕ್ಕಳು ಸದುಪಯೋಗ ಪಡೆದುಕೊಂಡು ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡಬೇಕೆಂದು ತಿಳಿಸಿದರು.

ಶಿಕ್ಷಣಾಧಿಕಾರಿ ಎಸ್.ಡಿ. ಕನವಳ್ಳಿ ಮಾತನಾಡಿ, ಸಿರಿಧಾನ್ಯಗಳ ರಾಜನೆಂದು ಕರೆಯುವ ರಾಗಿ ಅತಿಹೆಚ್ಚು ಪೋಷಕಾಂಶಗಳನ್ನು ಹೊಂದಿದ್ದು, ವಿದ್ಯಾರ್ಥಿಗಳು ರಾಗಿ ಮಾಲ್ಟ್ ಸೇವಿಸುವದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಿ, ವಿವಿಧ ವಿಟಮಿನ್‌ಗಳ ಕೊರೆತೆಯಿಂದ ಬರುವ ಖಾಯಿಲೆಗಳನ್ನು ತಡೆಗಟ್ಟಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯೆ ವಿದ್ಯಾ ಗಡಗಿ, ಬಸವರಾಜ ಧಾರವಾಡ, ಜಿಲ್ಲಾ ಶಿಕ್ಷಣ ಹಾಗೂ ತರಬೇತಿ ಸಂಸ್ಥೆಯ ಪ್ರಾಚಾರ್ಯ ಜಿ.ಎಲ್. ಬಾರಟಕ್ಕೆ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ. ಜಿನಗಾ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ಎಸ್. ಬುರಡಿ, ವಿ.ವಿ. ನಡುವಿನಮನಿ, ಎಮ್.ಎ. ಮಾಡಲಗೇರಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here