ಬೆಂಗಳೂರು:- ಬಸವನ ಗುಡಿಯಲ್ಲಿರುವ ಬಿಎಂಎಸ್ ಕಾಲೇಜಿನಲ್ಲಿ ಬಹುಮಹಡಿ ಕಟ್ಟಡದಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಅಕ್ಷಯ್ ರೆಡ್ಡಿ ಎಂದು ಗುರುತಿಸಲಾಗಿದೆ. ನಾಲ್ಕನೇ ವರ್ಷದ ಏರೋಸ್ಪೇಸ್ ವಿದ್ಯಾರ್ಥಿಯಾಗಿದ್ದ ಅಕ್ಷಯ್ ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ಅಧಿಕೃತ ಕಾರಣ ತಿಳಿದು ಬಂದಿಲ್ಲ. ಕಾಲೇಜು ಆಡಳಿತ ಮಂಡಳಿಯ ಟಾರ್ಚರ್‌ನಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.



