ತುಮಕೂರು: ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಕುಣಿಗಲ್ ರಸ್ತೆಯಲ್ಲಿರುವ ವಸತಿ ಶಾಲೆಯಲ್ಲಿ ನಡೆದಿದೆ. ಪಿಯುಸಿ ಓದುತ್ತಿದ್ದ ದೀಪಿಕಾ (19) ಮೃತ ದುರ್ದೈವಿಯಾಗಿದ್ದು,
Advertisement
ಶಿರಾ ತಾಲೂಕಿನ ಕುಂಟೆಗೌಡನಪಾಳ್ಯ ನಿವಾಸಿಯಾಗಿರುವ ದೀಪಿಕಾ, ತುಮಕೂರಿನ ಸಿದ್ದಾರ್ಥ ಪಿಯು ಕಾಲೇಜ್ ನಲ್ಲಿ ವ್ಯಾಸಂಗ ಮಾಡ್ತಿದ್ದಳು.
ವಸತಿ ಶಾಲೆಯ ಮಹಡಿ ಮೇಲೆ ತನ್ನ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.