ವಿಜಯಸಾಕ್ಷಿ ಸುದ್ದಿ, ಗದಗ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಬೆಂಗಳೂರು, ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಗದಗ, ಮೈಲಾರಪ್ಪ ಮೆಣಸಗಿ ಪದವಿಪೂರ್ವ ಕಾಲೇಜು ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಗದಗ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸ್ಥಳೀಯ ಸ್ವಾಮಿ ವಿವೇಕಾನಂದ ಪದವಿಪೂರ್ವ ವಿಜ್ಞಾನ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಬಸವರಾಜ ಯರನಾಳ ಕನ್ನಡ ಭಾವಗೀತೆ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಇನ್ನೋರ್ವ ವಿದ್ಯಾರ್ಥಿ ಶ್ರೀಕಾಂತ ಕಂಬಳಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ತೃತೀಯ ಸ್ಥಾನ ಪಡೆದಿದ್ದಾನೆ.
ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿಯ ಅಧ್ಯಕ್ಷರು, ಸರ್ವ ಸದಸ್ಯರು, ಪ್ರಾಚಾರ್ಯರು, ಉಪನ್ಯಾಸಕರು, ಉಪನ್ಯಾಸಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.