ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಾವನ್ನಪ್ಪಿದ ದುರ್ಘಟನೆ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರ ಸಮೀಪದ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಚಿರಂತ್ (16) ಎಂದು ಗುರುತಿಸಲಾಗಿದೆ. ಪರೀಕ್ಷೆ ಮುಗಿಸಿಕೊಂಡು ಬಸ್‌ನಲ್ಲಿ ಊರಿಗೆ ಬಂದಿದ್ದ ಚಿರಂತ್ ರಸ್ತೆ ದಾಟುವ ವೇಳೆ ಈ ಅಪಘಾತ ಸಂಭವಿಸಿದೆ.
ಈ ಸಂದರ್ಭದಲ್ಲಿ ವೇಗವಾಗಿ ಬಂದ ಕಾರು ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಚಿರಂತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಅತಿವೇಗ ಮತ್ತು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆ ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.



