ವಿಜಯಸಾಕ್ಷಿ ಸುದ್ದಿ, ಗದಗ : ಸರ್ವೋಚ್ಛ ನ್ಯಾಯಾಲಯ ನವದೆಹಲಿ, ಕರ್ನಾಟಕ ಉಚ್ಛ ನ್ಯಾಯಾಲಯ ಬೆಂಗಳೂರು ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಆದೇಶದನ್ವಯ ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಗದಗ ಜಿಲ್ಲೆಯಲ್ಲಿ ಜುಲೈ 13ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯಲ್ಲಿ ಒಟ್ಟು 16 ಬೆಂಚ್‌ಗಳನ್ನು ರಚಿಸಿ ರಾಜೀ ಸಂಧಾನಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಅದರಲ್ಲಿ 2645 ನ್ಯಾಯಾಲಯದಲ್ಲಿರುವ ಚಾಲ್ತಿ ಪ್ರಕರಣಗಳನ್ನು ಹಾಗೂ 27482 ವ್ಯಾಜ್ಯಪೂರ್ವ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಲಾಗಿದ್ದು, ಒಟ್ಟು 30127 ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.
ಇತ್ಯರ್ಥಗೊಂಡ ಪ್ರಕರಣಗಳಲ್ಲಿ 22 ಮೋಟಾರು ವಾಹನ ಅಪಘಾತ ಪ್ರಕರಣಗಳು, 83 ಚೆಕ್ ಬೌನ್ಸ್ ಪ್ರಕರಣಗಳು, 59 ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು, 312 ಅಸಲು ದಾವೆ ಪ್ರಕರಣಗಳು, 62 ಬ್ಯಾಂಕ್ ಹಾಗೂ ಹಣ ವಸೂಲಾತಿ ಪ್ರಕರಣಗಳು, 8 ವೈವಾಹಿಕ ಪ್ರಕರಣಗಳು, 88 ವಿದ್ಯುತ್ ಕಾಯ್ದೆ ಪ್ರಕರಣಗಳು ಸೇರಿದಂತೆ ಒಟ್ಟು 2645 ಚಾಲ್ತಿ ಪ್ರಕರಣಗಳನ್ನು ಒಟ್ಟು ರೂ.171013409ಗಳಿಗೆ ಪರಿಹಾರ ಒದಗಿಸುವುದರ ಮೂಲಕ ಇತ್ಯರ್ಥಪಡಿಸಲಾಗಿದೆ.
ಈ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ, ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರ ಎಸ್.ಶೆಟ್ಟಿ, ಪ್ರಧಾನ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಖಾಶಿಮ ಚೂರಿಖಾನ್, 1ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಖಾದರಸಾಬ ಎಚ್.ಬೆನಕಟ್ಟಿ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರು ವ ಸಿಜೆಎಂ ಜಿ.ಆರ್. ಶೆಟ್ಟರ, ಪ್ರಧಾನ ದಿವಾಣಿ ನ್ಯಾಯಾಧೀಶರಾದ ಸುನೀಲ ತಳವಾರ, ಜೆಎಂಎಫ್‌ಸಿ 1ನೇ ನ್ಯಾಯಾಲಯದ ದಿವಾಣಿ ನ್ಯಾಯಾಧೀಶರಾದ ದೀಪ್ತಿ ನಾಡಗೌಡ್ರ, ಜೆಎಂಎಫ್‌ಸಿ 2ನೇ ನ್ಯಾಯಾಲಯದ ದಿವಾಣಿ ನ್ಯಾಯಾಧೀಶರಾದ ಬೀರಪ್ಪ ಕಾಂಬಳೆ ಹಾಗೂ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಐ. ಹಿರೇಮನಿಪಾಟೀಲ, ಉಪಾಧ್ಯಕ್ಷ ಎ.ಎಂ. ಹದ್ಲಿ, ಪ್ರಧಾನ ಕಾರ್ಯದರ್ಶಿ ಬಿ.ಎಚ್. ಮಾಡಲಗೇರಿ, ಜಂಟಿ ಕಾರ್ಯದರ್ಶಿ ಪಿ.ಬಿ. ಕಣಗಿನಹಾಳ, ಖಜಾಂಚಿ ವಿ.ಎಚ್. ಮೇರವಾಡೆ, ಸರ್ಕಾರಿ ಅಭಿಯೋಜಕಿ ಸವಿತಾ ಎಂ.ಶಿಗ್ಲಿ, ಜಿಲ್ಲಾ ಸರ್ಕಾರಿ ವಕೀಲರಾದ ಎಂ.ಎಂ. ಕುಕನೂರ, ಅಪರ ಜಿಲ್ಲಾ ಸರ್ಕಾರಿ ವಕೀಲರಾದ ಜಿ.ಬಿ. ನೀಲರಡ್ಡಿ ಸೇರಿದಂತೆ ವಕೀಲ ವೃಂದದವರು, ಸಂಧಾನಕಾರ ವಕೀಲರು, ಪಕ್ಷಗಾರರು ಹಾಗೂ ಎಲ್ಲಾ ನ್ಯಾಯಾಲಯಗಳ ಸಿಬ್ಬಂದಿವರ್ಗ ಉಪಸ್ಥಿತರಿದ್ದು ಲೋಕ ಅದಾಲತ್ ಯಶಸ್ವಿಗೊಳಿಸಿದರು.
ಎಲ್ಲಾ ತಾಲೂಕುಗಳ ನ್ಯಾಯಾಧೀಶರು ಹಾಗೂ ವಕೀಲ ವೃಂದದವರು, ಸಿಬ್ಬಂದಿವರ್ಗ, ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ಗಣಿ ಮತ್ತು ಭೂ ಇಲಾಖೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಪಾಲ್ಗೊಂಡು ರಾಜೀ ಸಂಧಾನ ಯಶಸ್ವಿಗೊಳಿಸಿದರು.
ರಾಷ್ಟ್ರೀಯ ಲೋಕ ಅದಾಲತ್‌ಗೆ ಸಹಕಾರ ನೀಡಿದ ವಕೀಲ ವೃಂದದವರಿಗೆ, ಪಕ್ಷಗಾರರಿಗೆ, ಜಿಲ್ಲೆಯ ಎಲ್ಲಾ ನ್ಯಾಯಾಧೀಶರಿಗೆ, ಸಿಬ್ಬಂದಿ ವರ್ಗದವರಿಗೆ, ಜಿಲ್ಲಾ ನ್ಯಾಯಾಲಯದ ತಾಂತ್ರಿಕ ಸಿಬ್ಬಂದಿ ವರ್ಗದವರಿಗೆ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಜಿಲ್ಲಾ ಸರ್ಕಾರಿ ವಕೀಲರಿಗೆ, ಅಪರ ಜಿಲ್ಲಾ ಸರ್ಕಾರಿ ವಕೀಲರಿಗೆ, ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರುಗಳಿಗೆ, ಅಭಿಯೋಜನಾ ಇಲಾಖೆ, ಕಾರ್ಮಿಕ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ, ವಿಮೆ ಕಂಪನಿಯವರಿಗೆ, ಉಪ ವಿಭಾಗಾಧಿಕಾರಿಗಳಿಗೆ, ಗದಗ-ಬೆಟಗೇರಿ ನಗರಸಭೆ, ನಗರಯೋಜನಾ ಕೋಶ, ಸರ್ಕಾರಿ ಇಲಾಖೆಯವರಿಗೆ ಹಾಗೂ ಎಲ್ಲಾ ಮಾಧ್ಯಮದವರಿಗೆ, ಲೋಕ ಅದಾಲತ್‌ಗೆ ಸಹಕಾರ ನೀಡಿದ ಎಲ್ಲರಿಗೂ ಪ್ರಧಾನಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಅವರು ದsನ್ಯವಾದ ಅರ್ಪಿಸಿದ್ದಾರೆ.
ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ 301 ವಿವಿದs ಬ್ಯಾಂಕ್ ಪ್ರಕರಣಗಳು, 528 ಕಂದಾಯ ಅದಾಲತ್ ಪ್ರಕರಣಗಳು ಸೇರಿದಂತೆಒಟ್ಟು 27482 ವ್ಯಾಜ್ಯ ಪೂರ್ವ ಪ್ರಕರಣಗಳು ರೂ.74063883 ರೂ.ಗಳಿಗೆ ರಾಜೀ ಸಂಧಾನವಾಗಿದೆ. ಗದುಗಿನ 1ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ 5 ಪ್ರಕರಣಗಳಲ್ಲಿ ದಂಪತಿಗಳನ್ನು ಪುನಃ ಒಂದುಗೂಡಿಸಿ ಕಳುಹಿಸಿಕೊಡಲಾಯಿತು. ಮುಂಡರಗಿ ನ್ಯಾಯಾಲಯದಲ್ಲಿ 1 ಜೋಡಿ, ಲಕ್ಷ್ಮೇಶ್ವರದಲ್ಲಿ 1 ಜೋಡಿ ದಂಪತಿಗಳನ್ನು ಪುನಃ ಒಂದುಗೂಡಿಸಿ ಕಳುಹಿಸಿಕೊಡಲಾಯಿತು. ಒಟ್ಟು 7 ಜೋಡಿಗಳು ಈ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪುನಃ ಒಂದುಗೂಡಿದ್ದು ವಿಶೇಷವಾಗಿದೆ.