ಬೆಂಗಳೂರು:- ದಸರಾ ರಜೆ ಹಿನ್ನೆಲೆ ಮೆಜೆಸ್ಟಿಕ್‌ನಿಂದ 2 ಸಾವಿರಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್ಸುಗಳು ಕಾರ್ಯನಿರ್ವಹಿಸಲಿವೆ.
ಮೂರು ದಿನಗಳ ಕಾಲ ರಜೆಯಿರುವ ಹಿನ್ನೆಲೆ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಜನಜಂಗುಳಿಯಿಂದ ಕೂಡಿದೆ.
ಮೂರು ದಿನಗಳ ಕಾಲ ರಜೆಯಿರುವ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ 2000ಕ್ಕೂ ಹೆಚ್ಚು ಬಸ್‌ಗಳು ಕಾರ್ಯನಿರ್ವಹಿಸಲಿದ್ದು, ಅ.9 ರಿಂದ 12ರವರಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಹಾಗೂ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅ.13 ಹಾಗೂ 14 ರಂದು ಬಸ್‌ಗಳು ಕಾರ್ಯನಿರ್ವಹಿಸಲಿವೆ.
ಮೈಸೂರು ದಸರಾ ಜಂಬೂಸವಾರಿ ಹಿನ್ನೆಲೆ ಬೆಂಗಳೂರಿನಿಂದ ಮೈಸೂರಿಗೆ ಪ್ರತ್ಯೇಕವಾಗಿ 660 ದಸರಾ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್ ಕಾರ್ಯಾನಿರ್ವಹಿಸಲಿವೆ.
ಮೈಸೂರು ದಸರಾ ಜಂಬೂಸವಾರಿ ಹಿನ್ನೆಲೆ ಬೆಂಗಳೂರಿನಿಂದ ಮೈಸೂರಿಗೆ ಪ್ರತ್ಯೇಕವಾಗಿ 660 ದಸರಾ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್ ಕಾರ್ಯಾನಿರ್ವಹಿಸಲಿವೆ.