ಕೋಲಾರ: ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಕೆಲಸಕ್ಕೆ ತೆರಳಿದ್ದ ಒರ್ವ ಶಿಕ್ಷಕಿ ನಾಪತ್ತೆಯಾಗಿರುವ ಘಟನೆ ಕೋಲಾರ ತಾಲ್ಲೂಕಿನ ನರಸಾಪುರ ಗ್ರಾಮದಲ್ಲಿ ನಡೆದಿದೆ.
Advertisement
ನಾಪತ್ತೆಯಾದ ಶಿಕ್ಷಕಿಯ ಹೆಸರು ಅಕ್ತರ್ ಬೇಗಂ (50). ಅವರು ಕೋಲಾರ ತಾಲೂಕಿನ ಕೆ.ಬಿ.ಹೊಸಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು.
ಅಕ್ತರ್ ಬೇಗಂ ಅವರು ಕೋಲಾರ ನಗರದ ಅಂತರಗಂಗೆ ರಸ್ತೆಯಲ್ಲಿ ವಾಸಿಸುತ್ತಿದ್ದರು. ನಿನ್ನೆ ಬೆಳಿಗ್ಗೆ ಅವರು ಸಮೀಕ್ಷೆ ಕಾರ್ಯಕ್ಕಾಗಿ ಮನೆಯಿಂದ ಹೊರಟಿದ್ದರು. ಆದರೆ ಅವರು ಮೊಬೈಲ್ ಫೋನ್ ಅನ್ನು ಮನೆಯಲ್ಲೇ ಬಿಟ್ಟು, ಕೇವಲ ಐಡಿ ಕಾರ್ಡ್ ತೆಗೆದುಕೊಂಡು ಹೋಗಿದ್ದರು.
ಅದಾದ ನಂತರದಿಂದ ಅವರು ಯಾರಿಗೂ ಸಂಪರ್ಕವಾಗದೇ ನಾಪತ್ತೆಯಾಗಿದ್ದಾರೆ. ಕುಟುಂಬಸ್ಥರು ಮೊದಲು ಹುಡುಕಾಟ ನಡೆಸಿದರೂ ಫಲಕಾರಿಯಾಗದ ಕಾರಣ, ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.