ಬೆಂಗಳೂರಿನಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ – ಫ್ಲೈಓವರ್ ನಿಂದ ಕೆಳಗೆ ಬಿದ್ದ ಕಾರು!

0
Spread the love

ಬೆಂಗಳೂರು:- ನಗರದಲ್ಲಿ ಇಂದು ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದೆ. ಯಶವಂತಪುರ ಸರ್ಕಲ್ ನಲ್ಲಿ ನಸುಗಿಕ 3:45ರ ಹೊತ್ತಿಗೆ ಫ್ಲೈ ಓವರ್ ಮೇಲೆ ಸಾಗುತ್ತಿದ್ದ ಕಾರೊಂದು ಡಿವೈಡರ್ ದಾಟಿ ಅತ್ತ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.

Advertisement

ಆ ರಭಸದಿಂದಾಗಿ ಕಾರು ಹಾಗೂ ಬೈಕ್ ಗಳು ಫ್ಲೈಓವರ್ ಮೇಲಿನಿಂದ ಕೆಳಕ್ಕೆ ಬಿದ್ದಿವೆ. ಪರಿಣಾಮ ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಐವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಪೊಲೀಸರು, ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆಗೆ ತೆರಳುತ್ತಿದ್ದ ಕಾರು ಬೈಕ್​​ಗೆ ಡಿಕ್ಕಿ ಹೊಡೆದು ಫ್ಲೈಓವರ್​​​​​ ಮೇಲೆ ಡಿವೈಡರ್​​​ನಿಂದ ಹಾರಿ ಬಿದ್ದಿದೆ.

ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here