ಉಡುಪಿ:- ಕಾರ್ಕಳದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಜರುಗಿದೆ.
ಉಡುಪಿ ಜಿಲ್ಲೆ ಕಾರ್ಕಳದ ನಲ್ಲೂರಿನಲ್ಲಿ ಬೈಕ್‌ಗೆ ಈಚರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ.
ಸುರೇಶ್ ಆಚಾರ್ಯ, ಸುಮಿಕ್ಷಾ, ಸುಶ್ಮಿತಾ ಹಾಗೂ ಸುಶಾಂತ್ ಮೃತ ದುರ್ದೈವಿಗಳು. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಶ್ಮಿತಾ ಚಿಕಿತ್ಸೆ ನೀಡುತ್ತಿದ್ದ ಸಂದರ್ಭ ಮೃತಪಟ್ಟಿದ್ದಾಳೆ.
ಬೈಕ್‌ನಲ್ಲಿ ಪತಿ, ಪತ್ನಿ ಹಾಗೂ 3 ಮಕ್ಕಳು ಇದ್ದರು. ಪಾಜೆಗುಡ್ಡೆ ಬಳಿ ಬೈಕ್‌ನಲ್ಲಿ ಬರುತ್ತಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ.
ಭೀಕರ ರಸ್ತೆ ಅಪಘಾತದಲ್ಲಿ ಪತ್ನಿ ಮೀನಾಕ್ಷಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.



