HomeCrime Newsಹಳ್ಳಿಕೇರಿ ಬಳಿ ಭೀಕರ ಅಪಘಾತ; ಬಸ್, ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು,...

ಹಳ್ಳಿಕೇರಿ ಬಳಿ ಭೀಕರ ಅಪಘಾತ; ಬಸ್, ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

Spread the love

ಗದಗ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಹದಿನೈದಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊಪ್ಪಳ ರಸ್ತೆಯ ಹಳ್ಳಿಕೇರಿ- ಬನ್ನಿಕೊಪ್ಪ ನಡುವೆ ಜರುಗಿದೆ.

ಕೊಪ್ಪಳದಿಂದ ಗದಗ ಕಡೆ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಹಾಗೂ ತಮಿಳುನಾಡು ಮೂಲದ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಲಾರಿ ಚಾಲಕ ಹಾಗೂ ಬಸ್‌ನಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರನ್ನು ಲಾರಿ ಚಾಲಕ ವಿನೋದಕುಮಾರ್‌ ಹಾಗೂ ಕೊಪ್ಪಳ ಜಿಲ್ಲೆಯ ಭಾಗ್ಯನಗರ ನಿವಾಸಿ ಗೀತಾ ಕಲಾಲ್ ಮೃತಪಟ್ಟ ಮಹಿಳೆ ಎನ್ನಲಾಗಿದೆ. ಮೃತ ಮಹಿಳೆ ಸವದತ್ತಿ ಯಲ್ಲಮ್ಮನಗುಡ್ಡಕ್ಕೆ ಹೊರಟಿದ್ದಳು ಎನ್ನಲಾಗಿದೆ.

ಹದಿನೈದಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಘಟನಾ ಸ್ಥಳಕ್ಕೆ ಡಿವೈಎಸ್ಪಿ ಪ್ರಭುಗೌಡ, ಇನ್ಸ್‌ಪೆಕ್ಟರ್ ಮಂಜುನಾಥ್ ಕುಸಗಲ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!