ಯಾದಗಿರಿ: ಯಾದಗಿರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಯಾದಗಿರಿಯ ಸೈದಾಪುರ ಪಟ್ಟಣದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿ 15 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಹೋಟೆಲ್, ಬೇಕರಿ, ಗ್ಯಾರೇಜ್ ಸೇರಿ ಇನ್ನಿತರೆ ಅಂಗಡಿಗಳು ಸುಟ್ಟು ಹೋಗಿವೆ.
ಇನ್ನೂ ಬೆಂಕಿ ಅವಘಡದ ಘಟನೆ ನಡೆದು ಒಂದು ಗಂಟೆ ತಡವಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದಾರೆ. ಅಗ್ನಿಶಾಮಕದಳದಿಂದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಸೈದಾಪುರ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಆರಂಭಿಸುವಂತೆ ಒತ್ತಾಯ ಕೇಳಿಬಂದಿದೆ.



