ಬಾಗಲಕೋಟೆ:- ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಹುನಗುಂದ ತಾಲೂಕಿನ ಅಮೀನಗಡ ಬಳಿ ಜರುಗಿದೆ.
ಮೃತರನ್ನು ವೀರೇಶ ಅಂಗಡಿ, ಸಂದೇಶ್ ವಿರೇಶ್ ಅಂಗಡಿ, ಗಂಗಮ್ಮ ವಿರೇಶ್ ಅಂಗಡಿ ಎಂದು ಗುರುತಿಸಲಾಗಿದೆ. ಇನ್ನು ಇವರ ಮತ್ತೋರ್ವ ಮಗ ಸತೀಶ (28) ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಬೆಳಗ್ಗೆ ಈ ದುರ್ಘಟನೆ ಸಂಭವಿಸಿತ್ತು. ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬ ನಾಲ್ವರ ಪೈಕಿ ತಾಯಿ ಮಗ ಇಬ್ಬರೂ ಸ್ಥಳದಲ್ಲೇ ಜೀವ ಬಿಟ್ಟಿದ್ದರು. ಗಂಭೀರವಾಗಿ ಗಾಯಗೊಂಡು ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೀರೇಶ ಅಂಗಡಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಈ ಮೂಲಕ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ.
ಮೃತರು ಬಾದಾಮಿ ತಾಲೂಕಿನ ನೆಲುಗಿ ಗ್ರಾಮದವರು ಎನ್ನಲಾಗಿದೆ ಅಮೀನಗಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.