HomeKarnataka Newsಈಜಲು ಕೆರೆಗೆ ತೆರಳಿದ್ದ ವೇಳೆ ಘೋರ ದುರಂತ: ಹಾವೇರಿಯಲ್ಲಿ ಇಬ್ಬರು ಬಾಲಕರು ಸಾವು.!

ಈಜಲು ಕೆರೆಗೆ ತೆರಳಿದ್ದ ವೇಳೆ ಘೋರ ದುರಂತ: ಹಾವೇರಿಯಲ್ಲಿ ಇಬ್ಬರು ಬಾಲಕರು ಸಾವು.!

For Dai;y Updates Join Our whatsapp Group

Spread the love

ಹಾವೇರಿ: ಹಾವೇರಿಯಲ್ಲಿ ಘೋರ ಘಟನೆ ಸಂಭವಿಸಿದ್ದು, ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಪ್ರಜ್ವಲ್ ದೇವರಮನಿ (15) ಮತ್ತು ಸನತ್ ಭೂಸರೆಡ್ಡಿ (14) ಎಂದು ಮೃತರನ್ನು ಗುರುತಿಸಲಾಗಿದೆ.

ಸೈಕಲ್ ತೆಗೆದುಕೊಂಡು ಕೆರೆಗೆ ಈಜಲು ಹೋಗಿದ್ದ ಬಾಲಕರು ಸೈಕಲ್ ಅನ್ನು ಕೆರೆಯ ದಡದಲ್ಲಿ ಬಿಟ್ಟು ಈಜಲು ತೆರಳಿದ್ದಾರೆ. ನೀರಿಗಿಳಿದ ಸಂದರ್ಭ ಈಜಲು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಕೆರೆಯ ದಡದಲ್ಲಿ ಸೈಕಲ್ ಹಾಗೂ ಬಟ್ಟೆಗಳು ಇರುವುದನ್ನು ಗಮನಿಸಿದ ಸ್ಥಳೀಯರು ಕೆರೆಯಲ್ಲಿ ಬಾಲಕರು ಮೃತಪಟ್ಟಿರುವುದನ್ನು ಖಚಿತಪಡಿಸಿಕೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಓರ್ವ ಬಾಲಕನ ಮೃತದೇಹ ಕೆರೆಯಿಂದ ಹೊರತೆಗೆದಿದ್ದಾರೆ.

ಘಟನಾ ಸ್ಥಳಕ್ಕೆ ಶಿಗ್ಗಾಂವಿ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆರೆಯಲ್ಲಿ ಪ್ರಜ್ವಲ್ ಮೃತದೇಹ ಪತ್ತೆಯಾಗಿದ್ದು, ಇನ್ನೋರ್ವ ಬಾಲಕನ ಮೃತದೇಹ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಹುಲಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!