ತುಮಕೂರು: ಬೈಕ್ ಗೆ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಕೈದಾಳ ಗೇಟ್ ಬಳಿ ತಡರಾತ್ರಿ ನಡೆದಿದೆ.
Advertisement
ಸ್ವಾಮಿ (24) ಸ್ಥಳದಲ್ಲೇ ಸಾವನಪ್ಪಿದ ದುರ್ದೈವಿಯಾಗಿದ್ದು, ಹಿಂಬದಿ ಸವಾರ ಪ್ರಸನ್ನ ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನೊಣವಿನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.