ಮೈಸೂರು:- ಮೈಸೂರು ತಾಲೂಕು ಮೀನಾಕ್ಷಿಪುರದ ಹಿನ್ನೀರಿನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಜರುಗಿದೆ.
Advertisement
ನೀರಿನಲ್ಲಿ ಮುಳುಗಿದ ವಿದ್ಯಾರ್ಥಿಗಳನ್ನು ಪ್ರಶಾಂತ್, ಸಿದ್ದ, ಕೃಷ್ಣ ಎಂದು ಗುರುತಿಸಲಾಗಿದೆ. ಮಂಡ್ಯ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಮೀನಾಕ್ಷಿಪುರಕ್ಕೆ ಬಂದಿದ್ದ ವೇಳೆ ಘಟನೆ ಸಂಭವಿಸಿದೆ.
ವಿದ್ಯಾರ್ಥಿಗಳಿಗಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇಳವಾಲ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.