ಗಂಧದ ಗುಡಿ ಬಳಗದಿಂದ ಶಿಕ್ಷಕರಿಗೆ ಸನ್ಮಾನ

0
A tribute to the teachers from Gandha Gudi Balaga
Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಗಂಧದ ಗುಡಿ ಬಳಗ ಹಾಗೂ ಕರ್ನಾಟಕ ಪ್ರಜಾಪರ ವೇದಿಕೆ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುವಾರ ಪಟ್ಟಣದ ಸರಕಾರಿ ಹಿರಿಯ ಕನ್ನಡ ಗಂಡು ಮಕ್ಕಳ ಶಾಲೆಯ ಶಿಕ್ಷಕರನ್ನು ಸನ್ಮಾನಿಸಲಾಯಿತು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಬಳಗದ ರಾಜ್ಯ ಕಾರ್ಯಕಾರಿ ಸಮಿತಿ ಸಂಚಾಲಕ ಹಸನ ತಹಸೀಲ್ದಾರ, ದೇಶದ ಪರಂಪರೆಯಲ್ಲಿ ಗುರುವಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸಮಾಜದಲ್ಲಿ ಒಬ್ಬ ವ್ಯಕ್ತಿಯನ್ನು ಒಳ್ಳೆಯ ವ್ಯಕ್ತಿಯನ್ನಾಗಿ ರೂಪಿಸುವಲ್ಲಿ ಗುರುವಿನ ಪಾತ್ರ ಮಹತ್ವದ್ದಾಗಿದೆ. ಗುರುಕುಲ ಶಿಕ್ಷಣದಿಂದ ಹಿಡಿದು ಇಂದಿನ ಆಧುನಿಕ ಶಿಕ್ಷಣದವರೆಗೂ ಶಿಕ್ಷಕರು ವಿದ್ಯಾರ್ಥಿಗಳ ಜೀವನ ರೂಪಿಸುವಲ್ಲಿ ತಮ್ಮನ್ನು ಅರ್ಪಿಸಿಕೊಳ್ಳುತ್ತಿದ್ದಾರೆ.

ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ. ವಿದ್ಯಾರ್ಥಿಗಳ ಬಾಳನ್ನು ಬೆಳಗಿಸುವ ಶಿಕ್ಷಕರಿಗೆ ನಾವೆಲ್ಲರೂ ಚಿರಋಣಿಯಾಗಿರೋಣ ಎಂದು ಹೇಳಿದರು.

ಶಾಲೆಯ ಮುಖ್ಯೋಪಾಧ್ಯಾಯ ಎಸ್.ಎಚ್. ಪೂಜಾರ, ಶಿಕ್ಷಕರಾದ ಎಸ್.ಬಿ. ಖೋಕಲೆ, ಎಂ.ವಾಯ್. ಹರಿಜನ, ಎಸ್.ಎಸ್. ಶೆಟ್ಟರ, ಎಸ್.ಎಫ್. ಸುಣಗಾರ, ಎಸ್.ಸಿ. ಮೂರಶಿಳ್ಳಿ, ಪಿ.ಪಿ. ಗಾಣಿಗೇರ, ಎಸ್.ಎ. ಮಡಿವಾಳರ, ಶರೀಫ ಗುಡಿಮನಿ, ಶಿವಾನಂದ ಸುಲ್ತಾನಪೂರ, ಅನಿಲ ಗುಡಿಮನಿ, ಕಳಕಪ್ಪ ಬಿಸನಳ್ಳಿ ಮುಂತಾದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here