ಬೆಂಗಳೂರು:- ಉತ್ತರ ಪ್ರದೇಶ ಮೂಲದ ದಂಪತಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
Advertisement
ಗಂಡ ಅನೂಪ್ , ಹೆಂಡತಿ ರಾಖಿ ಸೇರಿ ಇಬ್ಬರು ಮಕ್ಕಳು ನೇಣಿಗೆ ಶರಣಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸದಾಶಿವ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತನಿಖೆ ಕೈಗೊಂಡಿದ್ದಾರೆ.
ಆನ್ ಲೈನ್ ವ್ಯಾಪಾರ ಮಾಡುತ್ತಿದ್ದ ಅನೂಪ್ ಕುಟುಂಬಕ್ಕೆ ಆರ್ಥಿಕ ಸಮಸ್ಯೆ ಉಂಟಾಗಿರೊ ಕಾರಣ ಆತ್ಮಹತ್ಯೆ ಮಾಡಿಕೊಂಡಿರೊ ಶಂಕೆ ವ್ಯಕ್ತವಾಗಿದೆ.
ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ತಿಳಿದು ಬರಬೇಕಾಗಿದೆ.