HomeGadag Newsನೀರಿಲ್ಲದೆ ನರಳಿದ ಗ್ರಾಮ... ಸಿಡಿದ ಆಕ್ರೋಶ!

ನೀರಿಲ್ಲದೆ ನರಳಿದ ಗ್ರಾಮ… ಸಿಡಿದ ಆಕ್ರೋಶ!

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕುಡಿಯುವ ನೀರಿಗಾಗಿ ಜನರು ಬೀದಿಗಿಳಿದು ಹೋರಾಟ ನಡೆಸುವ ದುಸ್ಥಿತಿ ಗದಗ ತಾಲೂಕಿನ ಕೊಟುಮಚಗಿ ಗ್ರಾಮದಲ್ಲಿ ನಿರ್ಮಾಣವಾಗಿದ್ದು, ಕಳೆದ ಮೂರು ತಿಂಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಮಹಿಳೆಯರು, ಯುವಕರು ಹಾಗೂ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿಗೆ ಬೀಗ ಹಾಕಿ ಉಗ್ರ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯತ್ ಕಚೇರಿ ಮುಂದೆ ಮುಳ್ಳಿನ ಗಿಡಗಳು ಹಾಗೂ ಕಲ್ಲುಗಳನ್ನು ಹಾಕಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಅಲ್ಲಿಯೇ ಅಡುಗೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.

ಸುಮಾರು 10 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಕೊಟುಮಚಗಿ ಗ್ರಾಮದಲ್ಲಿ ಹನಿ ಹನಿ ನೀರಿಗೂ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ನೀರಿಗಾಗಿ ಸಂಕಷ್ಟ ಅನುಭವಿಸುತ್ತಿದ್ದು, ಜಾನುವಾರುಗಳಿಗೂ ನೀರಿನ ಅಭಾವ ಎದುರಾಗಿದೆ.

ಗ್ರಾಮಕ್ಕೆ ಬೋರ್‌ವೆಲ್ ಹಾಗೂ ತುಂಗಭದ್ರಾ ನದಿಯಿಂದ ನೀರು ಪೂರೈಕೆ ಮಾಡಲಾಗುತ್ತಿದ್ರೂ, ಬೋರ್‌ವೆಲ್‌ಗಳ ಸಮರ್ಪಕ ನಿರ್ವಹಣೆ ಇಲ್ಲ. ಜೊತೆಗೆ ತುಂಗಭದ್ರಾ ನೀರು ಕೂಡ ನಿಯಮಿತವಾಗಿ ಬರುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.

ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಮಹಿಳೆಯರು ಮತ್ತು ಯುವಕರು ಪಂಚಾಯತ್ ಕಚೇರಿ ಎದುರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. “ನಮಗೆ ಕುಡಿಯುವ ನೀರು ಕೊಡಿ, ಇಲ್ಲವೇ ಅಧಿಕಾರಿಗಳು ಗ್ರಾಮಕ್ಕೆ ಬರಲಿ” ಎಂದು ಆಗ್ರಹಿಸಿದರು.

ಮೂರು ತಿಂಗಳಿಂದ ನೀರಿಲ್ಲದೆ ನರಳುತ್ತಿದ್ದೇವೆ. ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ತಕ್ಷಣ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಗ್ರಾಮದ ನೀರಿನ ಸಮಸ್ಯೆ ಕುರಿತು ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಸಹ ಗಮನ ಹರಿಸುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಬೇಸಿಗೆಯ ತಾಪಮಾನ ಏರಿಕೆಯಾಗುತ್ತಿರುವ ನಡುವೆಯೇ ಜನರ ಮೂಲಭೂತ ಅಗತ್ಯವಾದ ಕುಡಿಯುವ ನೀರಿನ ಸಮಸ್ಯೆ ಗಂಭೀರ ರೂಪ ಪಡೆದಿದೆ. ಆದರೂ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳ ಮೌನ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಈಗಾದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿ ಬಂದಿದೆ.

“ಮೂರು ತಿಂಗಳಿಂದ ನೀರಿಲ್ಲದೆ ನರಳುತ್ತಿದ್ದೇವೆ. ಅಧಿಕಾರಿಗಳಿಗೆ ಮನವಿ ಮಾಡಿದರೂ ಸ್ಪಂದನೆ ಇಲ್ಲ. ನಮಗೆ ನೀರು ಬೇಕು… ಭರವಸೆ ಬೇಡ.”

ಉಮಾ ಪಾಟೀಲ್, ಗ್ರಾಮಸ್ಥೆ

“ಜನರ ಮೂಲಭೂತ ಹಕ್ಕಾದ ಕುಡಿಯುವ ನೀರೇ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾಡಳಿತದ ಮೌನವೇ ಜನರ ಆಕ್ರೋಶಕ್ಕೆ ಕಾರಣ.”

ಶೇಖಪ್ಪ ದೇಸಾಯಿ, ಗ್ರಾಮಸ್ಥ

  • ಕೊಟುಮಚಗಿ ಗ್ರಾಮಸ್ಥರ ಆರೋಪಗಳು
  • ಮೂರು ತಿಂಗಳಿಂದ ಸಮರ್ಪಕ ನೀರು ಪೂರೈಕೆ ಇಲ್ಲ
  • ಬೋರ್‌ವೆಲ್ ನಿರ್ವಹಣೆಯಲ್ಲಿ ನಿರ್ಲಕ್ಷ್ಯ
  • ತುಂಗಭದ್ರಾ ನೀರು ನಿಯಮಿತವಾಗಿ ಬರುತ್ತಿಲ್ಲ
  • ಮಹಿಳೆಯರು, ಮಕ್ಕಳು ನೀರಿಗಾಗಿ ಪರದಾಟ
  • ಜಾನುವಾರುಗಳಿಗೂ ನೀರಿನ ಅಭಾವ
  • ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹ

Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!