ಭೀಮನ ಅಮಾವಾಸ್ಯೆ ದಿನವೇ ಮಹಿಳೆ ನಿಗೂಢ ಸಾವು..! ಮದುವೆಯಾದ 1 ವರ್ಷಕ್ಕೆ ದುರಂತ

0
Spread the love

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದಲ್ಲಿ ಮಹಿಳೆಯೊಬ್ಬಳು ಅನುಮಾನಾಸ್ಪವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಸ್ಪಂದನಾ (24) ಮೃತ ದುರ್ಧೈವಿಯಾಗಿದ್ದು, ಸ್ಪಂದನಾ ಕಾಲೇಜಿಗೆ ಹೋಗುತ್ತಿದ್ದ ಸಮಯದಲ್ಲಿ ಅಭಿಷೇಕ್ ಎಂಬಾತನನ್ನು ಪ್ರೀತಿಸಿ ರಿಜಿಸ್ಟರ್‌ ಮ್ಯಾರೇಜ್ ಆಗಿದ್ದಳು. ಸ್ಪಂದನಾ ಪೋಷಕರ ವಿರೋಧದ ನಡುವೆಯೇ ಇಬ್ಬರು ಮದುವೆಯಾಗಿದ್ದರು.

Advertisement

ಮದುವೆಯಾದ ಬಳಿಕ ಪತಿ ಕುಟುಂಬಸ್ಥರು ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದ ಬಗ್ಗೆ ಸ್ಪಂದನಾ ತಂದೆ ಬಳಿ ಹೇಳಿಕೊಂಡಿದ್ದಳು. ಬಳಿಕ 5 ಲಕ್ಷ ರೂ. ಹಣವನ್ನ ಕೊಟ್ಟು ರಾಜಿ ಸಂಧಾನ ಮಾಡಿಸಿದ್ದರು. ಅತ್ತೆ ಮಾತನ್ನ ಕೇಳಿ ನನ್ನ ಗಂಡ ಕಿರುಕುಳ ಕೊಡ್ತಿದ್ದಾನೆ ಎಂದು ಬುಧವಾರ ತಂದೆಗೆ ಕರೆ ಮಾಡಿ ಸ್ಪಂದನಾ ಕಣ್ಣೀರಿಟ್ಟಿದ್ದಳು.

ಅದಲ್ಲದೆ ಗುರುವಾರ ಭೀಮನ ಅಮಾವಾಸ್ಯೆ ಹಿನ್ನೆಲೆ ಪತಿ ಅಭಿಷೇಕ್, ಹೆಂಡತಿ ಕೈಯಲ್ಲಿ ಪೂಜೆ ಮಾಡಿಸಿಕೊಂಡಿದ್ದ ಎನ್ನಲಾಗಿದೆ. ಸ್ವಲ್ಪ ಹೊತ್ತು ಬಿಟ್ಟು ಮತ್ತೆ ಕರೆ ಮಾಡಿ ನಿಮ್ಮ ಮಗಳು ಸಾವನ್ನಪ್ಪಿದ್ದಾಳೆ ಎಂದು ಪತಿ ಕುಟುಂಬಸ್ಥರು ತಿಳಿಸಿದ್ದರು. ಆಸ್ಪತ್ರೆಗೆ ಹೋಗಿ ನೋಡಿದಾಗ ಮಗಳು ಸಾವನ್ನಪ್ಪಿರೋದು ಪತ್ತೆಯಾಗಿದೆ.

ಪತಿ ಹಾಗೂ ಅತ್ತೆ ಲಕ್ಷ್ಮಮ್ಮ ಮಗಳಿಗೆ ವರದಕ್ಷಿಣೆ ನೀಡುವಂತೆ ಕಿರುಕುಳ ನೀಡುತ್ತಿದ್ದರು ಎಂದು ಸ್ಪಂದನಾ ಕುಟುಂಬಸ್ಥರು ಆರೋಪಿಸಿದ್ದಾರೆ. ಸ್ಪಂದನಾ ಕುಟುಂಬಸ್ಥರು ಪತಿ ಅಭಿಷೇಕ್ ಮತ್ತು ಅತ್ತೆ ಲಕ್ಷ್ಮಮ್ಮ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್  ಠಾಣೆಗೆ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here