ಬೆಂಗಳೂರು: ಪ್ರೀತಿಸಿದ ಹುಡುಗಿ ದೂರವಾಗಿದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸತೀಶ್ ಕುಮಾರ್(25) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಕಾಲೇಜಿನಲ್ಲಿದ್ದಗಿನಿಂದ ಯುವತಿಯೋರ್ವಳನ್ನ ಪ್ರೀತಿಸುತ್ತಿದ್ದ ಸತೀಶ್, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದನು.
Advertisement
ಇಬ್ಬರು ಪರಸ್ಪರ ಪ್ರೀತಿಸಿ ಒಟ್ಟಿಗೆ ಓಡಾಡಿದ್ರು. ಆದ್ರೆ ಇತ್ತೀಚೆಗೆ ಯುವಕನಿಂದ ಯುವತಿ ದೂರವಾಗಿದ್ದಳು. ಇದರಿಂದ ಸಾಕಷ್ಟು ನೊಂದಿದ್ದ ಸತೀಶ್, ಮನೆಯಲ್ಲಿನ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾನೆ.
ಇನ್ನೂ ಮೃತದೇಹ ಅಂಬೇಡ್ಕರ್ ಆಸ್ಪತ್ರೆ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದ್ದು, ಘಟನೆ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲು ಮಾಡಲಾಗಿದೆ.