ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ರಸ್ತೆಬದಿ ನಿಂತಿದ್ದ ವಾಹನಕ್ಕೆ ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
Advertisement
30 ವರ್ಷದ ನವೀನ್ ಆತ್ಮಹತ್ಯೆಗೆ ಶರಣಾದ ಯುವಕ ಎನ್ನಲಾಗಿದೆ. ನವೀನ್ ಮೊದಲಿಗೆ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ರಕ್ತ ಸ್ರಾವವಾಗಿದ್ದರೂ ಸಾವನ್ನಪ್ಪದ ಹಿನ್ನೆಲೆ ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನವೀನ್ ಈ ಹಿಂದೆ ಅಪಘಾತದಲ್ಲಿ ಕಾಲು ಮುರಿದುಕೊಂಡಿದ್ದ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಆತ್ಮಹತ್ಯೆಗೆ ಕಾರಣ ಏನು ಎಂಬುದನ್ನು ಪೊಲೀಸರು ಪತ್ತೆಮಾಡುತ್ತಿದ್ದಾರೆ.