ಊಟ ಮಾಡುತ್ತಿದ್ದ ವೇಳೆ ಅನ್ನ ಗಂಟಲಿಗೆ ಸಿಲುಕಿ ಯುವಕ ಸಾವು!

0
Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ಊಟ ಮಾಡುತ್ತಿದ್ದ ವೇಳೆ ಅನ್ನದ ಅಗಳು ಗಂಟಲಲ್ಲಿ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ. ಬಿಣಗಾ ಮಾಳಸವಾಡ ನಿವಾಸಿ ಅಮಿತ್ ಮಾಳಸೇರ್ (38) ಮೃತ ದುರ್ದೈವಿ, ವೃತ್ತಿಯಲ್ಲಿ ಕಾರು ಚಾಲಕರಾಗಿದ್ದ ಅಮಿತ್,

Advertisement

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅಮಿತ್ ಭಾನುವಾರ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಅಗಳೊಂದು ಗಂಟಲಲ್ಲಿ ಸಿಲುಕಿತ್ತು. ತಕ್ಷಣ ಮನೆಯವರು ಅಮಿತ್‌ಗೆ ನೀರು ಕುಡಿಸಿದ್ದು,

ಆತ ಅಲ್ಲೇ ಕುಸಿದು ಬಿದಿದ್ದ. ಕೂಡಲೇ ಆತನನ್ನು ಅಂಬುಲೆನ್ಸ್ ಮೂಲಕ ಕಾರವಾರದ ಕ್ರಿಮ್ಸ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ವೈದ್ಯರು ಪರೀಕ್ಷಿಸಿದಾಗ ಗಂಟಲಲ್ಲಿ ಅನ್ನದ ಅಗಳು ಸಿಲುಕಿ ಅಮಿತ್ ಮೃತಪಟ್ಟಿದ್ದಾನೆಂದು ದೃಢಪಡಿಸಿದ್ದಾರೆ. ಘಟನೆ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here