ದೊಡ್ಡಬಳ್ಳಾಪುರ: ಸ್ನೇಹಿತರ ಜೊತೆ ಈಜಲು ಹೋಗಿದ್ದ ಯುವಕ ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕರಾಯಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿಯ ನಿವಾಸಿಯಾದ ತೇಜಸ್ (22) ಮೃತ ಯುವಕನಾಗಿದ್ದು,
Advertisement
ಬಿಸಿಲಿನ ತಾಪ ಹೆಚ್ಚಾಗಿದ್ದರಿಂದ ಸ್ನೇಹಿತರ ಜೊತೆ ಈಜಲು ಹೋಗಿದ್ದನು. ಈಜುವ ವೇಳೆ ಬಾವಿಯಲ್ಲಿ ಮುಳುಗಿ ಹೊರಬರಲು ಸಾದ್ಯವಾಗದೆ ಸಾವನ್ನಪ್ಪಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಮೃತದೇಹವನ್ನು ಹೊರತೆಗಿದ್ದಾರೆ. ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.