ಮೈಸೂರು:- ಮೈಸೂರಿನ ಅಶೋಕಪುರಂನಲ್ಲಿ ಪ್ರೀತಿ ವಿಚಾರಕ್ಕೆ ಶಿಕ್ಷಕಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆಗೈದ ಘಟನೆ ಜರುಗಿದೆ.
Advertisement
ಪೂರ್ಣಿಮಾ (36) ಹತ್ಯೆಯಾದ ಮಹಿಳೆ. ಇವರು ಪಾಂಡವಪುರದ ಎಲೆಕೆರೆ ಹ್ಯಾಂಡ್ ಪೋಸ್ಟ್ ಮೂಲದವರು ಎನ್ನಲಾಗಿದೆ. ಕ್ಯಾತನಹಳ್ಳಿ ಗ್ರಾಮದ ಅಭಿಷೇಕ್ ಹತ್ಯೆ ಆರೋಪಿಯಾಗಿದ್ದಾನೆ. ಶುಕ್ರವಾರ ಆರೋಪಿ, ಶಿಕ್ಷಕಿಗೆ ಚಾಕು ಇರಿದು ಪರಾರಿಯಾಗಿದ್ದ. ಚಾಕು ಇರಿತದಿಂದ ಗಾಯಗೊಂಡಿದ್ದ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಹಿಳೆ ಮೃತಪಟ್ಟಿದ್ದಾರೆ.
ಪ್ರೀತಿ ವಿಚಾರದಲ್ಲಿ ಕೋಪದಿಂದ ಯುವಕ ಮಹಿಳೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಎಂದು ತಿಳಿದುಬಂದಿದೆ.