HomeCrime Newsಅಮ್ಮ-ಅಕ್ಕನನ್ನು ನಿಂದಿಸಿದ್ದಕ್ಕೆ ಸ್ನೇಹಿತನ ಮೇಲೆಯೇ ಚಾಕು ಇರಿತ: ಚಿಕಿತ್ಸೆ ಫಲಿಸದೆ ಯುವಕ ಸಾವು

ಅಮ್ಮ-ಅಕ್ಕನನ್ನು ನಿಂದಿಸಿದ್ದಕ್ಕೆ ಸ್ನೇಹಿತನ ಮೇಲೆಯೇ ಚಾಕು ಇರಿತ: ಚಿಕಿತ್ಸೆ ಫಲಿಸದೆ ಯುವಕ ಸಾವು

For Dai;y Updates Join Our whatsapp Group

Spread the love

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಆರಂಭವಾದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ನಗರದ ನಿಮ್ಹಾನ್ಸ್ ಲೇಔಟ್‌ನಲ್ಲಿ ನಡೆದಿದೆ.

ಮೃತ ಯುವಕನನ್ನು ವಸೀಂ ಎಂದು ಗುರುತಿಸಲಾಗಿದ್ದು, ಕೊಲೆ ಆರೋಪಿಯನ್ನು ಸೈಯದ್ ಸಮೀರ್ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಬುಧವಾರ ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ನಡೆದಿದ್ದು, ಇಬ್ಬರೂ ಆಪ್ತ ಸ್ನೇಹಿತರಾಗಿದ್ದರು ಎನ್ನಲಾಗಿದೆ.

 ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ಆರಂಭವಾಗಿದೆ. ಈ ವೇಳೆ ವಸೀಂ, ಸಮೀರ್ ಅವರ ಕುಟುಂಬ ಸದಸ್ಯರನ್ನು, ವಿಶೇಷವಾಗಿ ತಂದೆ ಮತ್ತು ಅಕ್ಕನನ್ನು ನಿಂದಿಸಿದ್ದಾನೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಸಮೀರ್, ಮಾತಿಗೆ ಮಾತು ಬೆಳೆದು ವಸೀಂ ಮೇಲೆ ಹಲ್ಲೆ ನಡೆಸಿದ್ದಾನೆ.

ಜಗಳ ತೀವ್ರಗೊಂಡಾಗ ಸಮೀರ್ ಚಾಕುವಿನಿಂದ ವಸೀಂಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ವಸೀಂ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಆರೋಪಿ ಸೈಯದ್ ಸಮೀರ್ ಕೂಡ ಗಾಯಗೊಂಡಿದ್ದು, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಸಂಬಂಧ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ನಿಖರ ಕಾರಣ ಹಾಗೂ ಇತರೆ ಆಯಾಮಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!