ಧ್ವಜಸ್ಥಂಬ ನೆಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

0
Spread the love

ಬೆಳಗಾವಿ;- ಧ್ವಜಸ್ಥಂಬ ನೆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಯುವಕ ಸಾವನ್ನಪ್ಪಿದ ಘಟನೆ ಬೈಲಹೊಂಗಲ ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ.

Advertisement

ಪ್ರಜ್ವಲ್ ಚನಗೌಡ ಮುನೇಪ್ಪನವರ (18) ಮೃತ ದುರ್ದೈವಿ. ನವೆಂಬರ್ 1ರಂದು ಅದ್ದೂರಿ ರಾಜ್ಯೋತ್ಸವಕ್ಕೆ ಗ್ರಾಮದ ಬಸ್ ನಿಲ್ದಾಣದ ಮುಂದೆ ಧ್ವಜಸ್ತಂಭ ನೆಡುವಾಗ ಅವಘಡ ಸಂಭವಿಸಿದೆ.

ಕನ್ನಡ ರಾಜ್ಯೋತ್ಸವದ ನಿಮಿತ್ತ ಧ್ವಜ ಸ್ಥಂಭ ನಿರ್ಮಿಸಿ ಅದ್ದೂರಿ ಧ್ವಜಾರೋಹಣಕ್ಕೆ ಗ್ರಾಮದ ಯುವಕರು ಸಿದ್ಧತೆ ನಡೆಸಿದ್ದರು.

ಧ್ವಜಸ್ತಂಭ ನೆಡುವಾಗ ಅಲ್ಲಿಯೇ ಹಾಯ್ದು ಹೋಗಿದ್ದ ಸರ್ವೀಸ್ ವಾಯರ್ ಗೆ ಕಂಬ ತಾಗಿ ಅನಾಹುತ ನಡೆದಿದೆ. ಪ್ರಜ್ವಲ್ ಗೆ ವಿದ್ಯುತ್ ಪ್ರವಹಿಸಿದ ತಕ್ಷಣ ಆತನನ್ನು ಬೈಲಹೊಂಗಲ ತಾಲ್ಲೂಕಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ.

ಮನೆ ಮಗನ ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೈಲಹೊಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here