ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ನಿಧನ..!

0
Spread the love

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಅಕ್ಷಯ್‌ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಇದೇ ಜೂನ್‌ 15ರಂದು ಬಸವನಗುಡಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್‌ (29)ಗೆ ವೈದ್ಯರು ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದರು.

Advertisement

ಆದ್ರೆ ಶಸ್ತ್ರಚಿಕಿತ್ಸೆ ನಡೆದು 60 ತಾಸು ಕಳೆದ ಬಳಿಕವೂ ಮೆದುಳು ಸ್ಪಂದಿಸದೇ ಇರುವುದರಿಂದ ವೈದ್ಯರು ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಪರಿಗಣಿಸಿರುವುದಾಗಿ ಹೇಳಿದ್ದರು. ಆದ್ರೆ ಇಂದು ಅಕ್ಷಯ್​ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾನೆ. ಅಕ್ಷಯ್ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ


Spread the love

LEAVE A REPLY

Please enter your comment!
Please enter your name here