ಕಲಬುರ್ಗಿ:– ನಗರದ ರಾಜಾಪುರ ಬಡಾವಣೆಯ ಹೋಟೆಲ್ ಮುಂಭಾಗದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜರುಗಿದೆ.
33 ವರ್ಷದ ರೇವಣಸಿದ್ದಪ್ಪ ಪಾಳೇಕಾರ್ ಕೊಲೆಯಾದ ಯುವಕ.ಸ್ನೇಹಿತರ ಜೊತೆಗೆ ಸಿಗರೇಟ್ ಸೇದಲು ಹೋದಾಗ ಗಲಾಟೆಯಾಗಿ ಕೊಲೆ ನಡೆದಿದೆ ಎನ್ನಲಾಗಿದೆ. ಸ್ನೇಹಿತರೇ ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಇನ್ನೂ ಕೊಲೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



