ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಉತ್ತರ ತಾಲೂಕಿನ ಕಾಚೋಹಳ್ಳಿ ಗ್ರಾಮದಲ್ಲಿ SSLC ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ತನುಶ್ರೀ (17) ಮೃತ ಯುವತಿಯಾಗಿದ್ದು,
ತಂದೆ ರವಿ ತಾಯಿ ಶ್ವೇತಾ ದಂಪತಿಗಳ ಮಗಳಾಗಿದ್ದ ತನುಶ್ರೀ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಾಲ್ಕು ಬಾರಿ ಪೇಲ್ ಹಾಗಿದಕ್ಕೆ ಮನನೊಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಪ್ಯಾನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಾಗಡಿ ರಸ್ತೆಯ ಬ್ಯಾಡರಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ತನುಶ್ರೀಯ ಸಪ್ಲಿಮೆಂಟ್ರಿ ರಿಸೆಲ್ಟ್ ನಿನ್ನೆ ಬಂದಿತ್ತು. ಮೊಬೈಲ್ ನಲ್ಲಿ ನೋಡಿ ಮತ್ತೆ ಫೇಲ್ ಆಗಿದ್ದು ಗೊತ್ತಾಗಿದೆ. ಇದರಿಂದ ಮನನೊಂದು ನೇಣಿಗೆ ಶರಣಾಗಿದ್ದಾಳೆ.
ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆ ನೆಲಂಮಗಲ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಶವಾಗಾರದ ಮುಂದೆ ಮಗಳನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.