ನೆಲಮಂಗಲ: ಮೂರಂತಸ್ತಿನ ಕಟ್ಟಡದಿಂದ ಬಿದ್ದು ಯುವತಿ ಅನುಮಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಕಡಬಗೆರೆ ಜುನಿಫರ್ ಫಿಟ್ನೆಸ್ ಸೆಂಟರ್‌ನಲ್ಲಿ ಜರುಗಿದೆ.
Advertisement
ರಿಸೆಪ್ಷನಿಸ್ಟ್ ರಕ್ಷಿತಾ (20) ಮೃತ ಯುವತಿ. ಇವರು ಫಿಟ್ನೆಸ್ ಸೆಂಟರ್ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ್ದಾರೆ. ಕಳೆದ ಎಂಟು ತಿಂಗಳಿಂದ ಫಿಟ್ನೆಸ್ ಸೆಂಟರ್‌ನಲ್ಲಿ ರಿಸೆಪ್ಷನಿಸ್ಟ್ ಆಗಿ ಯುವತಿ ಕಾರ್ಯನಿರ್ವಹಿಸುತ್ತಿದ್ದರು. ಇದ್ದಕ್ಕಿದ್ದಂತೆ ಫಿಟ್ನೆಸ್ ಸೆಂಟರ್ ನ ಮೂರನೇ ಕಟ್ಟಡದ ಮೇಲಿಂದ ಬಿದ್ದು ರಕ್ಷಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ.
ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.