ಹಾಸನ: ಹಾಸನ ಜಿಲ್ಲೆಯಲ್ಲಿ ಇತ್ತೀಚಿನ ಕೆಲವು ದಿನಗಳಿಂದ ಯುವ ಜನರು ಹೃದಯಾಘಾತದಿಂದ ಸಾವಿಗೀಡಾಗುತ್ತಿರುವುದು ಹೆಚ್ಚಾಗಿದೆ. ಇದೀಗ ಹಾಸನ ಮೂಲದ ಯುವತಿ ಬೆಂಗಳೂರಿನಲ್ಲಿ ಹೃದಯಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಸುಪ್ರಿಯಾ(22) ಮೃತ ದುರ್ಧೈವಿಯಾಗಿದ್ದು,
Advertisement
ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕಟ್ಟಳ್ಳಿ ಗ್ರಾಮದ ನಿವಾಸಿಯಾಗಿದ್ದ ಸುಪ್ರಿಯಾ ಕುಟುಂಬ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಿದ್ದು, ಸುಪ್ರಿಯಾ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪದವಿ ಓದುತ್ತಿದ್ದಳು.
ವಿದ್ಯಾಭ್ಯಾಸದ ಜೊತೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದಳು. ಆದ್ರೆ, ಮನೆಯಲ್ಲಿ ಸುಪ್ರಿಯಾಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದಿದ್ದಾಳೆ. ಕೂಡಲೇ ಪೋಷಕರು, ಸುಪ್ರಿಯಾಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ, ದುರದೃಷ್ಟವಶಾತ್, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಸುಪ್ರಿಯಾ ಮೃತಪಟ್ಟಿದ್ದಾಳೆ.