ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗವು `ಆರಂಭ್-2025’ ಶೀರ್ಷಿಕೆಯಡಿ 3ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗಾಗಿ ಸ್ವಾಗತ ಸಮಾರಂಭವನ್ನು ಸಿವಿಲ್ ವಿಭಾಗದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿತ್ತು.
ಕಾರ್ಯಕ್ರಮಕ್ಕೆ ಇನೋವೊಯರ್ ಟೆಕ್ನಾಲಜೀಸ್ ಬೆಂಗಳೂರು ಸಂಸ್ಥೆಯ ಸಂಸ್ಥಾಪಕ ಮತ್ತು ನಿರ್ದೇಶಕರಾದ ಪ್ರವೀಣ ಕಲ್ಮಠ್ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ, ಅಕಾಡೆಮಿಕ್ ಅಧ್ಯಯನದ ಜೊತೆಗೆ ತಾಂತ್ರಿಕ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳುವ ಅಗತ್ಯವನ್ನು ವಿವರಿಸಿದರು.
ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ಎಂ. ಅವಾಟಿ ಅಧ್ಯಕ್ಷತೆ ವಹಿಸಿದ್ದರು. ಎಲ್ಲಾ ಇಸಿಇ ವಿಭಾಗದ ಬೋಧಕ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.



