ಬೆಂಗಳೂರು;- ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ ಹಾಲಶ್ರೀ ಜಾಮೀನು ಕೋರಿ ಬೆಂಗಳೂರಿನ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿದೆ.
Advertisement
ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಜಾಮೀನು ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರೇಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸರಕಾರಕ್ಕೆ ನೊಟೀಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು. ಬೆಂಗಳೂರಿನ ಮ್ಯಾಜಿಸ್ಟ್ರೇಟ್, ನಗರದ ಸೆಷನ್ಸ್ ನ್ಯಾಯಾಲಯ ಈ ಎರಡು ಕೋರ್ಟ್‍ಗಳೂ ಹಾಲಶ್ರೀ ಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾ ಮಾಡಿ ಆದೇಶಿಸಿದ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್‍ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.