ಐಸಿಸಿ ರ್ಯಾಂಕಿಂಗ್ನಲ್ಲಿ ಅಭಿಷೇಕ್ ಶರ್ಮಾ ವಿಶ್ವ ದಾಖಲೆ ನಿರ್ಮಿಸಿದ್ದು, ಘಟಾನುಘಟಿಗಳ ದಾಖಲೆಯನ್ನೇ ಮುರಿದಿದ್ದಾರೆ.
ಏಷ್ಯಾಕಪ್‌ನಲ್ಲಿ ಮಿಂಚಿದ್ದ ಅಭಿಷೇಕ್ ಶರ್ಮಾ ಐಸಿಸಿ ಟಿ20 ಬ್ಯಾಟಿಂಗ್ ಶ್ರೇಯಾಂಕದಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. 931 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಇತಿಹಾಸ ಸೃಷ್ಟಿಸಿರುವ ಇವರು, ಡೇವಿಡ್ ಮಲನ್, ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಅವರ ಹಿಂದಿನ ದಾಖಲೆಗಳನ್ನು ಮುರಿದು ನಂ. 1 ಸ್ಥಾನಕ್ಕೇರಿದ್ದಾರೆ.
ಅಭಿಷೇಕ್ ಶರ್ಮಾ ಈಗಾಗಲೇ ಐಸಿಸಿ ಟಿ20 ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ನಂ. 1 ಸ್ಥಾನದಲ್ಲಿದ್ದರು. ಈ ವಾರವೂ ಅಗ್ರಸ್ಥಾನದಲ್ಲಿ ಮುಂದುವರೆದಿರುವ ಅಭಿಷೇಕ್, ಐಸಿಸಿ ಶ್ರೇಯಾಂಕದ ರೇಟಿಂಗ್ ಪಾಯಿಂಟ್‌ಗಳಲ್ಲಿ ವಿಚಾರದಲ್ಲಿ ಅತ್ಯಧಿಕ ರೇಟಿಂಗ್ ಪಾಯಿಂಟ್ ಕಲೆಹಾಕುವ ಮೂಲಕ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಭಾರತದ ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ಗೂ ಸಾಧಿಸಲು ಸಾಧ್ಯವಾಗದುದ್ದನ್ನು ಸಾಧಿಸುವ ಮೂಲಕ ಅಭಿಷೇಕ್ ಶರ್ಮಾ ವಿಶ್ವದ ಗಮನ ಸೆಳೆದಿದ್ದಾರೆ.