ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಕೇಸ್ನಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಸೋಮವಾರ ಆದೇಶ ಹೊರಡಿಸಲಾಗಿದೆ. ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿತ್ತು.
ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಸೂರಜ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದರು. ಇದೀಗ ಸೂರಜ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 2 ಲಕ್ಷ ರೂ ಬಾಂಡ್, ಇಬ್ಬರ ಶ್ಯೂರಿಟಿ ಹಾಗೂ ತನಿಖೆಗೆ ಸಹಕರಿಸುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿದೆ. ಅಲ್ಲದೇ ಸಂತ್ರಸ್ತರನ್ನು ಭೇಟಿಯಾಗುವಂತಿಲ್ಲ. ಸಾಕ್ಷ್ಯ ನಾಶಕ್ಕೆ ಯತ್ನಿಸುವಂತಿಲ್ಲ. ತನಿಖೆಗೆ ವಿಚಾರಣೆಗಳಿಗೆ ಹಾಜರಾಗುವಂತೆ ಕೋರ್ಟ್ ಸೂಚಿಸಿದೆ.