ಗದಗ: ವಿಶ್ವವಿದ್ಯಾಲಯ ಕುಲಾಧಿಪತಿ ಹುದ್ದೆಯನ್ನು ರಾಜ್ಯಪಾಲರ ಬದಲು ಸಿಎಂ ಗೆ ನೀಡುತ್ತಿರುವ ರಾಜ್ಯ ಸರ್ಕಾರದ ನಡೆಯ ವಿರುದ್ಧ ಗದಗನಲ್ಲಿ ಎಬಿವಿಪಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಯಿತು.
ಗದಗ ಆರ್.ಡಿ.ಪಿ.ಆರ್ ವಿವಿ ಬಳಿ ವಿಶ್ವವಿದ್ಯಾಲಯಗಳಲ್ಲಿ ರಾಜಕೀಯ ಮಾಡಲು ಹೊರಟ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಅಂತೆಲ್ಲಾ ನಾಮ ಫಲಕ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಸಂಸ್ಥೆಗಳು ರಾಜಕೀಯದಿಂದ ಮುಕ್ತವಾಗಿರಲಿ ಎಂದು ಸರ್ಕಾರದ ವಿರುದ್ಧ ಹಲವು ನಾಮಫಲಕಗಳನ್ನು ಹಿಡಿದು, ಕಾನೂನು ಸಚಿವ ಎಚ್.ಕೆ ಪಾಟೀಲ, ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು.
ಇನ್ನೂ ರಾಜ್ಯ ಸರ್ಕಾರ ತೆಗೆದುಕೊಂಡ ಆರ್.ಡಿ.ಪಿ.ಆರ್ ವಿವಿ ಕುಲಾಧಿಪತಿ ಬಗೆಗಿನ ನಿರ್ಣಯ ಕೈಬಿಡಬೇಕು. ಅದಲ್ಲದೆ ಹೀಗೆ ಮುಂದುವರೆದರೆ ಅಧಿವೇಶನ ವೇಳೆ ಸುವರ್ಣಸೌಧ ಮುತ್ತಿಗೆ ಹಾಕುವ ಎಚ್ಚರಿಕೆಯನ್ನು ವಿದ್ಯಾರ್ಥಿಗಳು ನೀಡಿದ್ದಾರೆ.



