ಕಾರವಾರ:- ಸಿದ್ಧಾಪುರದ ರವೀಂದ್ರ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಭೀಕರ ಅವಘಡ ಸಂಭವಿಸಿದೆ. ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜಾತ್ರೆಗೆಂದು ಅಪಾರ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿದರು.
Advertisement
ಈ ವೇಳೆ ಭಕ್ತರ ಮೇಲೆ ಕಾರು ಹರಿದು ಯುವತಿ ಸಾವನ್ನಪ್ಪಿ, 8 ಮಂದಿ ಗಾಯಗೊಂಡ ಘಟನೆ ಮಂಗಳವಾರ ರಾತ್ರಿ ಜರುಗಿದೆ. ಘಟನೆಯಲ್ಲಿ 21 ವರ್ಷದ ದೀಪಾ ರಾಮಗೊಂಡ ಮೃತಪಟ್ಟರೆ, ಸಿದ್ದಾಪುರದ ಕಲ್ಪನಾ, ಜಾನಕಿ, ಚೈತ್ರಾ, ಜ್ಯೋತಿ, ಮಾದೇವಿ, ಗೌರಿ, ರಾಮಪ್ಪ ಹಾಗೂ ಗಜಾನನ ಭಟ್ ಗಂಭೀರ ಗಾಯಗೊಂಡಿದ್ದಾರೆ.
ಸಿದ್ದಾಪುರದ ರೋಶನ್ ಫೆರ್ನಾಂಡೀಸ್ ಮದ್ಯ ಸೇವಿಸಿ ಕಾರು ಚಲಾಯಿಸಿದ್ದರಿಂದ ಈ ದುರಂತ ಸಂಭವಿಸಿದೆ. ಸಿದ್ಧಾಪುರ ತಾಲೂಕು ಆಸ್ಪತ್ರೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಗಂಭೀರ ಗಾಯಗೊಂಡ ಕಲ್ಪನಾ ನಾಯ್ಕ್ ಹಾಗೂ ಇನ್ನೋರ್ವ ಮಹಿಳೆಯನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.