ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ: ಗ್ರೇಟ್‌ ಎಸ್ಕೇಪ್ ಆದ ಸವಾರರು!

0
Spread the love

ರಾಮನಗರ:- ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಅಪಘಾತದಲ್ಲಿ ಅದೃಷ್ಟವಶಾತ್ ಸವಾರರು, ಗ್ರೇಟ್‌ ಎಸ್ಕೇಪ್ ಆಗಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕಣ್ವ ರಸ್ತೆ ಬಳಿ ಜರುಗಿದೆ.

Advertisement

ಎಕ್ಸ್‌ಪ್ರೆಸ್‌ವೇನಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸ್ವಚ್ಛಗೊಳಿಸುವ ವೇಳೆ ಈ ಅವಘಡ ಸಂಭವಿಸಿದೆ. ಬೆಂಗಳೂರು ಕಡೆಗೆ ಹೋಗ್ತಿದ್ದ ಕಾರು ಬ್ಯಾರಿಕೇಡ್ ಗಮನಿಸದೇ ಸಡನ್ ಆಗಿ ಬ್ರೇಕ್ ಹಾಕಿದೆ. ಈ ವೇಳೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಮುಂದೆ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here