ಕೋಲಾರ: ಕಲ್ಲು ಕ್ರಷರ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಯಂತ್ರಕ್ಕೆ ಸಿಲುಕಿ ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ಜರುಗಿದೆ.
ಪಶ್ಚಿಮ ಬಂಗಾಳ ಮೂಲದ 35 ವರ್ಷದ ನಂದಾ ಲಾಲ್ ಸಾವನ್ನಪ್ಪಿದ ಕಾರ್ಮಿಕ. ವೆಂಕಟೇಶ್ ಎಂಬುವರಿಗೆ ಸೇರಿದ ಐಶ್ವರ್ಯ ಕ್ರಷರ್ ನಲ್ಲಿ ಈ ದುರಂತ ಜರುಗಿದೆ. ಹೊಸಕೋಟೆ ಯ ಎಂ ವಿ ಜೆ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನಿಸಲಾಗಿದೆ.
ಕೂಡಲೇ ಸ್ಥಳಕ್ಕೆ ಮಾಸ್ತಿ ಠಾಣೆಯ ಪೊಲೀಸರು ಭೇಟಿ, ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.



