ಜಾತ್ರೆಯಲ್ಲಿ ಅವಘಡ: ರಥದ ಚಕ್ರಕ್ಕೆ ಸಿಲುಕಿ ಯುವಕ ದುರ್ಮರಣ!

0
Spread the love

ವಿಜಯಪುರ:- ಜಾತ್ರೆಯಲ್ಲಿ ಅವಘಡ ಸಂಭವಿಸಿ ರಥದ ಚಕ್ರಕ್ಕೆ ಸಿಲುಕಿ ಯುವಕ ದುರ್ಮರಣ ಹೊಂದಿದ ಘಟನೆ ಜರುಗಿದೆ.

Advertisement

ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ಜರುಗಿದೆ. ದೇವೇಂದ್ರ ಬಡಿಗೇರ್ ಮೃತ ದುರ್ದೈವಿ. ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಅವಘಡ ಸಂಭವಿಸಿದ್ದು, ಎಲ್ಲಾ ದೃಶ್ಯವೂ ಸೆರೆಯಾಗಿದೆ.

ರಥವನ್ನು ಎಳೆಯುವ ವೇಳೆ ಯುವಕ ಆಯತಪ್ಪಿ ಚಕ್ರದ ಅಡಿಗೆ ಸಿಲುಕಿದ್ದಾನೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ದೇವೇಂದ್ರ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here