HomeIndia Newsಯಶ್ ‘ಟಾಕ್ಸಿಕ್’ ಕಾರ್ಯಕ್ರಮದಲ್ಲಿ ಅವಘಡ! ಸೌಂಡ್ ಬಾಕ್ಸ್ ಕುಸಿದು 4 ವಿದ್ಯಾರ್ಥಿಗಳಿಗೆ ಗಾಯ, FIR ದಾಖಲು

ಯಶ್ ‘ಟಾಕ್ಸಿಕ್’ ಕಾರ್ಯಕ್ರಮದಲ್ಲಿ ಅವಘಡ! ಸೌಂಡ್ ಬಾಕ್ಸ್ ಕುಸಿದು 4 ವಿದ್ಯಾರ್ಥಿಗಳಿಗೆ ಗಾಯ, FIR ದಾಖಲು

For Dai;y Updates Join Our whatsapp Group

ಹೈದರಾಬಾದ್: ನಟ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಅದ್ಧೂರಿ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವಘಡ ಸಂಭವಿಸಿದ್ದು, ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸೈಬರಾಬಾದ್ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಎಫ್‌ಐಆರ್ ದಾಖಲಿಸಿದ್ದಾರೆ.

ಆಗಸ್ಟ್ 22ರಂದು ಹೈದರಾಬಾದ್‌ನ ಮಲ್ಲಾ ರೆಡ್ಡಿ ಯೂನಿವರ್ಸಿಟಿಯ ಬೃಹತ್ ಮೈದಾನದಲ್ಲಿ ‘ಟಾಕ್ಸಿಕ್’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಟ ಯಶ್, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಸೇರಿದಂತೆ ಹಲವು ಗಣ್ಯರು, ಸಚಿವ ಹಾಗೂ ಶಿಕ್ಷಣ ಸಂಸ್ಥೆಗಳ ಮಾಲೀಕ ಮಲ್ಲಾ ರೆಡ್ಡಿ ಮತ್ತು ನಿರ್ಮಾಪಕ ದಿಲ್ ರಾಜು ಸೇರಿದಂತೆ ಹಲವರು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೆ ಭಾರಿ ಸಂಖ್ಯೆಯಲ್ಲಿ ಜನರು, ಅದರಲ್ಲೂ ವಿದ್ಯಾರ್ಥಿಗಳು ಆಗಮಿಸಿದ್ದರು. ಈ ವೇಳೆ ನಟ ಯಶ್ ವೇದಿಕೆಯಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಕೆಲ ಯುವಕರು ಸೌಂಡ್ ಬಾಕ್ಸ್ ಅಳವಡಿಸಲು ನಿರ್ಮಿಸಲಾಗಿದ್ದ ಕಬ್ಬಿಣದ ಪೈಪ್‌ಗಳ ಸ್ಟ್ರಕ್ಚರ್ ಮೇಲೆ ಏರಿ ಕುಳಿತಿದ್ದರು ಎನ್ನಲಾಗಿದೆ.

ಯುವಕರ ತೂಕಕ್ಕೆ ಸೌಂಡ್ ಬಾಕ್ಸ್ ಕೆಳಗೆ ಬಿದ್ದಿದ್ದು, ಅದರೊಂದಿಗೆ ಕಬ್ಬಿಣದ ಪೈಪ್‌ಗಳಿಂದ ನಿರ್ಮಿಸಲಾಗಿದ್ದ ಸ್ಟ್ರಕ್ಚರ್ ಕೂಡ ಕುಸಿದಿದೆ. ಸ್ಟ್ರಕ್ಚರ್ ಮೇಲೆ ಕುಳಿತಿದ್ದ ವಿದ್ಯಾರ್ಥಿಗಳೂ ಕೆಳಗೆ ಬಿದ್ದಿದ್ದು, ನಾಲ್ವರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಂಬುಲೆನ್ಸ್ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸೌಂಡ್ ಬಾಕ್ಸ್ ಹಾಗೂ ಸ್ಟ್ರಕ್ಚರ್ ಕುಸಿದ ದೃಶ್ಯಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಘಟನೆಗೆ ಸಂಬಂಧಿಸಿದಂತೆ ಸೈಬರಾಬಾದ್ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಮಲ್ಲಾ ರೆಡ್ಡಿ ಇನ್‌ಸ್ಟಿಟ್ಯೂಟ್‌ನ ಮ್ಯಾನೇಜ್‌ಮೆಂಟ್ ಹಾಗೂ ‘ಟಾಕ್ಸಿಕ್’ ಪ್ರೀ-ರಿಲೀಸ್ ಕಾರ್ಯಕ್ರಮ ಆಯೋಜಿಸಿದ್ದ ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img