ಮೈಸೂರು: ಕಾರು, ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಜಾತಿಗಣತಿಗೆ ತೆರಳಿದ್ದ ಇಬ್ಬರು ಶಿಕ್ಷಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
Advertisement
ಬೂದನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸ್ವಾಮೀಗೌಡ ಹಾಗೂ ಸಹ ಶಿಕ್ಷಕಿ ಮಧುಶ್ರೀ ಗಾಯಾಗೊಂಡವರಾಗಿದ್ದಾರೆ.ಅಪಘಾತದಲ್ಲಿ ಮುಖ್ಯಶಿಕ್ಷಕನ ಕಾಲು ಮುರಿದಿದೆ.
ಸಹ ಶಿಕ್ಷಕಿಗೆ ಸಣ್ಣಪುಟ್ಟ ಗಾಯವಾಗಿದೆ. ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.