ತುಮಕೂರು: ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕಂಬದಹಳ್ಳಿ ಗೇಟ್ ಬಳಿ ನಡೆದಿದೆ.
ಹರ್ಷಿತ್ (24), ಪ್ರವೀಣ್ (20) ಮೃತ ದುರ್ದೈವಿಗಳಾಗಿದ್ದು, ಮೃತರು ಹೊಳವನಹಳ್ಳಿ ಗ್ರಾಮದವರಾಗಿದ್ದು, ಗೋವಾಗೆ ತೆರಳಿ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



