ಲಾರಿ ಮತ್ತು ಬೈಕ್ ನಡುವೆ ಅಪಘಾತ: ಮೂವರು ಸ್ಥಳದಲ್ಲೇ ಸಾವು

0
Spread the love

ಬಾಗಲಕೋಟೆ : ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಸೀಮೀಕೇರಿ ಬೈಪಾಸ್ ಬಳಿ ನಡೆದಿದೆ. ಸಿದ್ದು (16), ಸಂತೋಷ (16) ಮತ್ತು ಕಾಮಣ್ಣ (16) ಮೃತ ದುರ್ದೈವಿಗಳಾಗಿದ್ದು,ಮೃತರು ಪ್ರೌಢಶಾಲಾ ಹಂತದ ವಿದ್ಯಾರ್ಥಿಗಳು.

Advertisement

ಮೂವರು ಬೈಕ್ ಮೇಲೆ ತೆರಳುವಾಗ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಮೃತರೆಲ್ಲರೂ ಮರನಾಳ ಗ್ರಾಮದವರು ಎಂಬುದಾಗಿ ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲಾದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here