ಲಾರಿ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿ ಕಂಡಕ್ಟರ್ ಸೇರಿ 10 ಮಂದಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಬೇಡರಪುರ ಎಂಜಿನಿಯರಿಂಗ್ ಕಾಲೇಜು ಬಳಿ ನಡೆದಿದೆ. ಚಾಮರಾಜನಗರದಿ೦ದ ಮೈಸೂರಿಗೆ ಹೊರಟಿದ್ದ ಬಸ್‌ನ ಸ್ಟೀರಿಂಗ್ ಲಾಕ್ ಆದ ಪರಿಣಾಮ ಬಸ್ ಏಕಾಏಕಿ ರಸ್ತೆ ಮಧ್ಯೆ ನಿಂತಿದೆ.
Advertisement
ಈ ವೇಳೆ ಹಿಂದಿನಿಂದ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದಿದ್ದರಿಂದ ಬಸ್‌ನಲ್ಲಿದ್ದ 10 ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳಿಗೆ ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಕೂಡಲೆ ಸಂಚಾರ ಠಾಣೆ ಪೋಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಲಾರಿ ಹಾಗೂ ಬಸ್ ಅನ್ನು ವಶಕ್ಕೆ ಪಡೆದಿದ್ದಾರೆ.