ಚಿತ್ತೂರು:– ಜಿಲ್ಲೆಯ ಪಲಮನೇರು ಮಂಡಲದ ಮೊಗಿಲಿ ಘಾಟ್ ರಸ್ತೆಯಲ್ಲಿ ಅಪಘಾತ ಸಂಭವಿಸಿ, ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 7 ಮಂದಿ ಇಂದು ಸಂಜೆ ಮೃತಪಟ್ಟ ಘಟನೆ ಜರುಗಿದೆ.
Advertisement
ಘಟನೆಯಲ್ಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಚಿತ್ತೂರು ಜಿಲ್ಲೆಯ ಬಂಗಾರುಪಾಲೆಂ ಮೊಗಿಲಿ ಘಾಟ್ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, 33 ಮಂದಿ ಗಾಯಗೊಂಡಿದ್ದು, ಪಲಮನೇರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.