Accident: ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ: ನಾಲ್ವರು ಸಾವು, ಓರ್ವ ಗಂಭೀರ!

0
Spread the love

ಚಿತ್ರದುರ್ಗ:- ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಹೊಳಲ್ಕೆರೆ ಚಿತ್ರಹಳ್ಳಿ ಬಳಿ ತಡರಾತ್ರಿ ಜರುಗಿದೆ. ಕಾರೊಂದು ಟ್ರಾಕ್ಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

Advertisement

ಮೃತರನ್ನು ಕಾವ್ಯ, ಗಂಗಮ್ಮ, ಹಂಸಿಕ, ಮತ್ತು ಮನಸ್ವಿನಿ ಎಂದು ಗುರುತಿಸಲಾಗಿದೆ. ಕಾರು ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ವೇಳೆ ಮುಂದೆ ಹೋಗುತ್ತಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಗಾಯಾಳುವನ್ನು ಯಶವಂತ್ ಎನ್ನಲಾಗಿದೆ. ಇವರೆಲ್ಲರೂ ಕೂಡ ಅರೇನಹಳ್ಳಿ ಗ್ರಾಮದವರಾಗಿದ್ದಾರೆ.

ಘಟನಾ ಸ್ಥಳಕ್ಕೆ ಚಿತ್ರಹಳ್ಳಿ ಪೊಲೀಸರು ಭೇಟಿ‌ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here