ಚಿತ್ರದುರ್ಗ:- ಸರಣಿ ರಸ್ತೆ ಅಪಘಾತದಲ್ಲಿ 4 ಎಮ್ಮೆಗಳು ಸಾವನ್ನಪ್ಪಿದ ಘಟನೆ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ಜರುಗಿದೆ.
Advertisement
ಲಾರಿ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತವುಂಟಾಗಿದೆ. ಅದೃಷ್ಟವಶಾತ್ ವಾಹನ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.